Tuesday 17 February 2015

ಮಹಾ ಶಿವರಾತ್ರಿ ಶುಭಾಶಯಗಳು


ಮಹಾ ಶಿವರಾತ್ರಿಯು ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದು. ಈ ಹಬ್ಬವನ್ನು ಮಾಘ ಮಾಸದ ಬಹುಳ ಚತುರ್ದಶಿಯಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಫೆಬ್ರುವರಿ ಅಥವಾ ಮಾರ್ಚ್ ತಿಂಗಳಿನಲ್ಲಿ ಶಿವರಾತ್ರಿ ಹಬ್ಬ ಬರುತ್ತದೆ.ಇಡೀ ದಿನ ಉಪವಾಸ, ಜಾಗರಣೆಗಳನ್ನು ಮಾಡಿ,೪ ಯಾಮಗಳಲ್ಲೂ ಶಿವ ಪೂಜೆಯನ್ನು ಮಾಡುವ ಮೂಲಕ ಆಚರಿಸಲಾಗುತ್ತದೆ. ಶಿವ ಅಂದ್ರೆ ಕಲ್ಯಾಣ ಎಂದು ಅರ್ಥ.  ಲೋಕ ಕಲ್ಯಾಣಕ್ಕಾಗಿ ಮತ್ತು ಕುಟುಂಬದ ಕಲ್ಯಾಣಕ್ಕಾಗಿ ರಾತ್ರಿ ಇಡೀ ಆ ಪರಶಿವನ ಧ್ಯಾನ ಮಾಡುವುದು. ಇದರ ಬಗ್ಗೆ ಒಂದು ಸಣ್ಣ ಕಥೆ ಇದೆ.  ಶಿವಪುರಾಣದಲ್ಲಿ ಹೇಳಿರುವಂತೆ, ಒಮ್ಮೆ ಬ್ರಹ್ಮ ಮತ್ತು ವಿಷ್ಣು ಅವರುಗಳಲ್ಲಿ ಯಾರು ಶ್ರೇಷ್ಠರು ಎಂಬ ಬಗ್ಗೆ ಜಗಳವಾಯಿತು.  ಇವರಿಬ್ಬರ ಜಗಳದಿಂದ ಬೇಸತ್ತ ಇತರ ದೇವರುಗಳು, ಮಧ್ಯಸ್ಥಿಕೆ ವಹಿಸಲು ಶಿವನನ್ನು ಕೇಳಿಕೊಂಡರು.  ಆಗ ಶಿವನು ಉದ್ದನೆಯ ಬೆಂಕಿಯ ಕಂಬದಂತೆ ಇವರಿಬ್ಬರ ಮಧ್ಯೆ ನಿಂತನು.  ಬೆಂಕಿಯ ತೀಕ್ಷಣತೆಯನ್ನು ಕಂಡು ಇವರಿಬ್ಬರೂ ಇದರ ಮೂಲವನ್ನು ಹುಡುಕಲು ಹೊರಟರು.  ಬ್ರಹ್ಮನು ಹಂಸದ ರೂಪವಾಗಿ ಆಕಾಶಕ್ಕೂ, ವಿಷ್ಣುವು ವರಾಹ ರೂಪದಲ್ಲಿ ಭೂಮಿಯೊಳಗೂ ಹೊರಟರು.  ಸಾವಿರಾರು ಮೈಲುಗಳನ್ನು ಕ್ರಮಿಸಿದರೂ ಇದರ ಮೂಲ ತಿಳಿಯದಾಯಿತು.  ಇವರಿಬ್ಬರ ಪರದಾಟವನ್ನು ಕಂಡು ಶಿವನು ಮುಗುಳ್ನಕ್ಕನು.  ಆತನ ನಗುವಿನಿಂದ ಅಲ್ಲಿಯೇ ಇದ್ದ ಕೇತಕಿ ಪುಷ್ಪವು ಕೆಳಗಿಳಿದು ಬೀಳಹತ್ತಿತು.  ಅಲ್ಲಿಯೇ ಬರುತ್ತಿದ್ದ  ಬ್ರಹ್ಮನಿಗೆ ಇದು ಗೋಚರವಾಯಿತು.  ಆತನು ಆ ಪುಷ್ಪವನ್ನು ಎಲ್ಲಿಂದ ಬಂದೆಯೆಂದು ಕೇಳಲು, ಅದು ಈ ಬೆಂಕಿಯ ಕಂಬದ ಮೇಲ್ಭಾಗದಿಂದ ಕೆಳಗಿಳಿದು ಬರುತ್ತಿದ್ದೇನೆಂದು ತಿಳಿಸಿತು.  ಅಲ್ಲಿಯವರೆವಿಗೆ ಬೆಂಕಿಯ ಮೂಲವನ್ನು ತಿಳಿಯದ ಬ್ರಹ್ಮನು ಪುಷ್ಪವನ್ನೇ ಸಾಕ್ಷಿಯನ್ನಾಗಿ ತೆಗೆದುಕೊಂಡನು.  ಆಗ ಕುಪಿತಗೊಂಡ ಶಿವನು ತನ್ನ ಮೂಲ ಸ್ವರೂಪವನ್ನು ತೋರಿದನು.  ಮತ್ತು ಬ್ರಹ್ಮನನ್ನು ಯಾರೂ ಪೂಜಿಸಬಾರದೆಂದೂ, ಕಪಟತನ ತೋರಿದ ಕೇತಕಿ ಪುಷ್ಪವನ್ನು ಯಾರೂ ಪೂಜೆಗೆ ಬಳಸಬಾರದೆಂದೂ ಶಾಪವನ್ನಿತ್ತನು.  ಅಂದು ಅಂದರೆ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ೧೪ನೆಯ ದಿನ, ಶಿವನು ಲಿಂಗರೂಪವನ್ನು ಧರಿಸಿದನು.  ಅವನನ್ನು ತೃಪ್ತಿಗೊಳಿಸಿ, ಸಂಪತ್ತು, ಸುಖ ಮತ್ತು ಸಮೃದ್ಧಿಯನ್ನು ಹೊಂದಲು ಪೂಜಿಸುವರು. 

ಮೂಲ: ಗೂಗಲ್ 

No comments: