ಸುಭಾಷ್ ಚಂದ್ರ ಬೋಸ್ ಸ್ಮರಣೆ
ಜನನ: ಜನವರಿ 23, 1897 ಮರಣ (ಸಂಭಾವಿತ): ಆಗಸ್ಟ್ 18, 1945 ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸದ ಇವರು, ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ತತ್ವಗಳನ್ನು ಒಪ್ಪದೆ ಪಕ್ಷದಿಂದ ಹೊರಬಂದರು. ಮುಂದೆ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರುಭಾರತೀಯ ರಾಷ್ಟ್ರೀಯ ಸೇನೆಯನ್ನು ಅನುಸ್ಥಾಪಿಸಿದರು. ಇವರು ಟೈವಾನ್‍ನಲ್ಲಿ 1945 ರ ಆಗಸ್ಟ್ 18 ರಂದು ವಿಮಾನ ಅಪಘಾತದಲ್ಲಿ ಮರಣ ಹೊಂದಿದರು ಎಂದು ಭಾವಿಸಲಾಗಿದೆ. ಆದರೆ ಈ ಘಟನೆ ವಿವಾದಿತವಾಗಿದೆ
No comments:
Post a Comment