Wednesday, 25 May 2016

School Praveshanolsavam 2016-17
±Á¯Á ¥ÀæªÉÃ±ÉÆÃvÀìªÀ 2016-17


                                           
   Praveshotsava Geethe (Kan)          Pravesholsava Ganam (Mal)  



                            
Banner Download                  Poster Download

Wednesday, 13 April 2016


ಎಲ್ಲರಿಗೂ ವಿಷು ಹಬ್ಬದ ಶುಭಾಶಯಗಳು

 

ಸೌರಮಾನ ಯುಗಾದಿ ಆಚರಿಸುವುದು ಮೇಷ ಮಾಸದ ಮೊದಲದಿನ. ಅಂದು ಸೂರ್ಯ ಮೇಷರಾಶಿಯನ್ನು ಪ್ರವೇಶಿಸುತ್ತಾನೆ. ಚಾಂದ್ರಮಾನ ಯುಗಾದಿ ಬರುವುದು ಚೈತ್ರಮಾಸದ ಮೊದಲ ದಿನ. ಚೈತ್ರ ವೈಶಾಖ ವಸಂತಋತು ಅಂತ ನಾವು ಬಾಲ್ಯದಲ್ಲಿ ಕಲಿತದ್ದು ನೆನಪಗಿರಬೇಕಲ್ಲಾ...ಬೇಸಗೆಯ ರಜೆ, ಮಾವು, ಹಲಸು,ಗೇರು, ಅಜ್ಜನ ಮನೆ...ನೆನಪುಗಳ ಮೆರವಣಿಗೆ ಸಾಗಿ ಬಂದಿರಲೇಬೇಕು.

ನಾನು ತುಳುನಾಡಿನವಳು. ನಮ್ಮದು ಸೌರಮಾನ ಯುಗಾದಿ ಆಚರಣೆ. ಅಂದರೆ ನಮಗೆ ನಾಳೆ ಹೊಸ ವರ್ಷ . ಅದನ್ನು ನಾವು ’ವಿಷು ಹಬ್ಬ’ ಎಂದು ಆಚರಿಸುತ್ತೇವೆ. ಪ್ರತಿ ವರ್ಷ ಏಪ್ರಿಲ್ ೧೪ ರಂದು ಇದು ಸಂಭವಿಸುತ್ತದೆ.

ತುಳುನಾಡು ಮಾತ್ರ ಅಲ್ಲ, ತಮಿಳು ನಾಡು, ಕೇರಳ, ಪಂಜಾಬ್, ಬಂಗಾಳ, ಅಸ್ಸಾಂ ರಾಜ್ಯಗಳಲ್ಲೂ ಇಂದಿನ ದಿನವನ್ನು ಹೊಸ ವರ್ಷವೆಂದು ಆಚರಿಸಲಾಗುತ್ತದೆ.
ತುಳುವರಿಗೆ-ಬಿಸುಪರ್ಬ, ಮಲೆಯಾಳಿಗಳಿಗೆ-ವಿಷು, ತಮಿಳರಿಗೆ-ಪುತ್ತಾಂಡ್, ಪಂಜಾಬಿಗಳಿಗೆ-ಬೈಸಾಕಿ, ಅಸ್ಸಾಮಿಗಳಿಗೆ-ಬಿಹು. ಒಟ್ಟಿನಲ್ಲಿ ಇದು ರೈತಾಪಿ ವರ್ಗದ ಹಬ್ಬ.


ನಾವು ಸಮೃದ್ಧವಾಗಿ ಬದುಕಲು ಬೇಕಾದ್ದನ್ನೆಲ್ಲವನ್ನು ಕೊಟ್ಟ ಭೂತಾಯಿಗೆ ಕೃತಜ್ನತೆಗಳನ್ನು ಅರ್ಪಿಸುವ ದಿನವೇ ’ಬಿಸು ಪರ್ಬ’. ಈಹಬ್ಬದಲ್ಲಿ ’ಬಿಸುಕಣಿ’ಗೆ ತುಂಬಾ ಮಹತ್ವ. ಬಿಸುಕಣಿ ಅಂದರೆ ಹೊಸವರ್ಷದ ಸ್ವಾಗತಕ್ಕೆ ಇಡುವ ಕಳಶ. ಬಿಸುವಿನ ಹಿಂದಿನ ದಿನ ರಾತ್ರಿಯೇ ದೇವರ ಮುಂದೆ ಕಣಿಯನ್ನು ಇಡಲಾಗುತ್ತದೆ.

ದೇವರ ಮುಂದೆ ದೊಡ್ಡ ಹರಿವಾಣದಲ್ಲಿಒಂದು ಸೇರು ಅಕ್ಕಿಯನ್ನು ಹಾಕಿ ಅದರ ಮಧ್ಯೆ ಸುಲಿಯದ ತೆಂಗಿನಕಾಯಿಯನ್ನು ಇಡುತ್ತಾರೆ. ಅದರ ಸುತ್ತ ಆ ವರ್ಷ ತಮ್ಮ ಜಮೀನಿನಲ್ಲಿ ಬೆಳೆದ ಹೊಸ ಫಲ ವಸ್ತುಗಳನ್ನು ಜೋಡಿಸಬೇಕು. ಮುಖ್ಯವಾಗಿ ಮುಳ್ಳುಸೌತೆ, ಮಾವು, ಗೇರು, ಹಲಸು, ಸಿಹಿಕುಂಬಳಕಾಯಿ, ಒಡ್ಡುಸೌತೆ[ಮಂಗಳೂರು ಸೌತೆ], ಬೆಂಡೆ, ತೊಂಡೆ, ಅಲಸಂಡೆ ಮುಂತಾದವುಗಳನ್ನಿಟ್ಟು ನಡುವೆ ಒಂದು ಕನ್ನಡಿಯನ್ನಿಡಬೇಕು. ಕೆಲವೆಡೆ ಇವುಗಳ ಜೊತೆ ಬಂಗಾರದ ಆಭರಣಗಳು ಹಾಗು ಹೊಸಬಟ್ಟೆಗಳನ್ನೂ ಕಣಿಯ ಮುಂದಿಡುತ್ತಾರೆ.

ಬಿಸು ಹಬ್ಬದಲ್ಲಿ ಕಣಿಯ ದರ್ಶನ ಪಡೆಯುವುದು ಬಹಳ ಮುಖ್ಯವಾದುದು. ಮರುದಿನ ಬೆಳಿಗ್ಗೆ ಎಚ್ಚರವಾದೊಡನೆ ಕಣ್ಣು ತೆರೆಯದೆ ಹಾಗೆಯೇ ಕಣ್ಣ್ಮುಚ್ಚಿಕೊಂಡೇ ದೇವರ ಮುಂದೆ ಬಂದು ವಿಷುಕಣಿಯ ದರ್ಶನ ಪಡೆಯಬೇಕು. ಅನಂತರವೇ ಎಣ್ಣೆ ಅಭ್ಯಂಜನ ಮಾಡಿ ಹೊಸಬಟ್ಟೆ ತೊಟ್ಟು ಹಿರಿಯರಿಗೆ ನಮಸ್ಕರಿಸಿ ಆಶೀರ್ವಾದ ಪಡೆದು ಅಲ್ಲಿಟ್ಟಿರುವ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಬೇಕು. ಮಧ್ಯಾಹ್ನ ಹಬ್ಬದೂಟ ಉಂಡು ಸಂಜೆ ಸಮೀಪದ ದೇವಸ್ಥಾನ ಅಥವಾ ಭೂತಸ್ಥಾನಕ್ಕೆ ಹೋಗಿ ದೇವರ ಅಥವಾ ದೈವದ ದರ್ಶನ ಪಡೆಯಬೇಕು.

ಎಲ್ಲರಿಗೂ ವಿಷು ಹಬ್ಬದ ಶುಭಾಶಯಗಳು. ವಸಂತ ಋತು ನಿಮ್ಮೆಲ್ಲರ ಬಾಳಿನಲ್ಲಿಯೂ ಸದಾ ಕಾಲ ನಳನಳಿಸುತ್ತಿರಲಿ.



ಕೃಪೆ: ಗೂಗಲ್ 





Thursday, 31 March 2016

Study Tour To Bekal Resorts,  Pallikkara-Kasaragod

ಬೇಕಲ ಕೋಟೆಗೊಂದು ಕಲಿಕಾ ಯಾತ್ರೆ














Wednesday, 30 March 2016

 ನೆಚ್ಚಿನ ಮುಖ್ಯಶಿಕ್ಷಕರಿಗೆ ವಿದಾಯ ಸಮಾರಂಭ...
            ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ನಮ್ಮ ವಿದ್ಯಾಲಯದಿಂದ ನಿವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ ಶ್ರೀ ಅಬ್ಬಾಸ್ .ಕೆ ಅವರಿಗೆ ಶಾಲಾ ರಕ್ಷಕ-ಶಿಕ್ಷಕ ವೃಂದದಿಂದ ಬೀಳ್ಕೊಡುಗೆ ಸಮಾರಂಭವು 30 ಮಾರ್ಚ್ 2016 ರಂದು ಜರಗಿತು. ಪಂಚಾಯತ್ ಸದಸ್ಯರಾದ ಶ್ರೀಮತಿ ರೇವತಿ ನಾಯ್ಕ್ ಸಭೆಯನ್ನು ಉದ್ಘಾಟಿಸಿದರು. ನಿವೃತ್ತರಾಗುತ್ತಿರುವ ಅಭಾಸ್.ಕೆ ಅವರಿಗೆ ಶಾಲು ಹೊದೆಸಿ, ನೆನಪಿನ ಕಾಣಿಕೆ, ಫಲ ಪುಷ್ಪಗಳನ್ನು ನೀಡಲಾಯಿತು. ಸುಮಾರು 33 ವರ್ಷಗಳ ಸೇವಾ ಜೀವನದಿಂದ ನಿವೃತ್ತರಾಗುವ ನೆಚ್ಚಿನ ಮುಖ್ಯಶಿಕ್ಷಕರಿಗೆ ಎಲ್ಲರೂ ಶುಭಕೋರಿದರು. ಯಸ್.ಎಂ.ಸಿ ಅಧ್ಯಕ್ಷ ಸಿದ್ದಿಕ್, ಯಸ್.ಯಸ್.ಜಿ ಸದಸ್ಯ ಶ್ರೀ ಕೃಷ್ಣ ಹೆಬ್ಬಾರ್, ನೆರೆಯ ಶಾಲಾ ಶಿಕ್ಷಕ ಸಜೀವನ್, ಶಾಲಾ ಶಿಕ್ಷಕರಾದ ಕೃಷ್ಣಕುಮಾರ್, ಪ್ರವೀಣ್, ಪೂರ್ಣಿಮಾ, ಫಾತಿಮಾ ಮುಂತಾದವರು ಉಪಸ್ತಿತರಿದ್ದರು.